7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ - ಸುರೇಶ್ ಕುಮಾರ್ ಸ್ಪಷ್ಟನೆ
ಬುಧವಾರ, 8 ಜನವರಿ 2020 (08:52 IST)
ಬೆಂಗಳೂರು : 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರ ಬಗ್ಗೆ ಭಾರೀ ಗೊಂದಲ ಸೃಷ್ಟಿಯಾಗಿತ್ತು, ಇದೀಗ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇಲ್ಲ ಬದಲಾಗಿ ಸಾಮಾನ್ಯ ಮೌಲ್ಯಂಕನ ಪರೀಕ್ಷೆ ಮಾತ್ರ ನಡೆಸಲಾಗುವುದು ಎಂದು ಹೇಳುವುದರ ಮೂಲಕ ಸಚಿವ ಸುರೇಶ್ ಕುಮಾರ್ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, 7ನೇ ತರಗತಿಗೆ ಮೌಲ್ಯಂಕನ ಪರೀಕ್ಷೆ ನಡೆಸುವುದರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಭಯ ಕಡಿಮೆಯಾಗುತ್ತದೆ. ಈ ಪರೀಕ್ಷೆಯಲ್ಲಿ ಯಾರನ್ನು ಉತ್ತೀರ್ಣ, ಅನುತ್ತೀರ್ಣ ಮಾಡುವುದಿಲ್ಲ. ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸಲು ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.