ರಾಜ್ಯದಲ್ಲಿ ಧರ್ಮಯುದ್ಧ ಇಲ್ಲ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಯಾವುದೇ ಧರ್ಮಯುದ್ಧ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕೋಮುಗಲಭೆ, ಘರ್ಷಣೆಗೆ ಅವಕಾಶ ನೀಡದೇ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಐಜಿ- ಡಿಐಜಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಕಾನೂನು ಸುವುವಸ್ಥೆ ಕಾಪಾಡುವಲ್ಲಿ ಯಾವುದೇ ರಾಜೀ ಇಲ್ಲ. ಧಾರವಾಡ, ಶಿವಮೊಗ್ಗ ಮುಂತಾದೆಡೆ ಈಗಾಗಲೇ ಪರಿಸ್ಥಿತಿ ನಿಯಂತ್ರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಇದೇ ವೇಳೆ ಎಚ್.ಡಿ.ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ನಾವು ಕೆಲಸ ಮಾಡುವ ಜಾಗದಲ್ಲಿ ಇದ್ದೇವೆ. ಆರೋಪಕ್ಕೆ ಪ್ರತಿಕ್ರಿಯಿಸಲು ಅಲ್ಲ ಎಂದು ತಿರುಗೇಟು ನೀಡಿದರು.