ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಇರುವುದರಿಂದ ಯಾವುದೇ ಶಾಲೆ ಮುಚ್ಚಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಮಕ್ಕಳಿಗೆ ಇಂದು ಮಿಡ್ ಟರ್ಮ್ ಪರೀಕ್ಷೆ ನಡೆಯುತ್ತಿದೆ.
ಎರಡು ವರ್ಷ ಪರೀಕ್ಷೆ ಆಗಿಲ್ಲ. ಹಾಗಾಗಿ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ.ಈ ಸಂದರ್ಭದಲ್ಲಿ ಶಾಲೆ ನಿಲ್ಲಿಸಲು ಆಗಲ್ಲ ಎಂದರು.
ಶಾಲೆಗಳಲ್ಲಿ ಈ ಹಿಂದೆ ನೀಡಲಾಗಿದ್ದ ಮಾರ್ಗಸೂಚಿಯೇ ಮುಂದುವರಿಯಲಿದೆ. ಇದರಲ್ಲಿ ಬದಲಾವಣೆ ಇಲ್ಲ. ಆದರೆ ವತಿ ಶಾಲೆಗಳಲ್ಲಿ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ ಅವುಗಳ ಕಡೆ ಗಮನ ಹರಿಸಲಾಗುತ್ತಿದೆ. ಬಿಇಓ ಮತ್ತು ಟಿಹೆಚ್‌ಓ ಸಮಿತಿ ನೇತೃತ್ವದಲ್ಲಿ ತಪಾಸಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಹಾಸ್ಟೆಲ್‌ಗಳಲ್ಲಿ ಒಟ್ಟಿಗೆ ಊಟಕ್ಕೆ ಹೋಗಬಾರದು. ದೂರ ದೂರದಲ್ಲಿ ಕೂತು ಊಟ ಮಾಡಬೇಕು. ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರ ಮಲಗಲು ಸೂಚನೆ ನೀಡಲಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾರ್ಗಸೂಚಿ ಮಾಡಿಲ್ಲ ಎಂದು ಸಚಿವರು ವಿವರಿಸಿದರು.