ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಲ್ಲ: ಬೊಮ್ಮಾಯಿ

ಶುಕ್ರವಾರ, 2 ಡಿಸೆಂಬರ್ 2022 (06:35 IST)
ಶಿವಮೊಗ್ಗ : ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ಭದ್ರಾವತಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು.

ಹಿಜಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ