ಧರ್ಮಸ್ಥಳ, ಡಾ ಡಿ ವೀರೇಂದ್ರ ಹೆಗ್ಡೆ ವಿರುದ್ಧ ಮಾತನಾಡುವ ಹಾಗಿಲ್ಲ: ಮಹೇಶ್ ಶೆಟ್ಟಿಗೆ ಹೈಕೋರ್ಟ್ ಎಚ್ಚರಿಕೆ

Krishnaveni K

ಮಂಗಳವಾರ, 21 ಜನವರಿ 2025 (10:42 IST)
ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನ, ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಡೆ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುವ ಹಾಗಿಲ್ಲ ಎಂದು ಹಿಂದೂಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿಕಳೆದ ಕೆಲವು ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಈ ನಡುವೆ ಅವರು ಧರ್ಮಸ್ಥಳ ದೇವಸ್ಥಾನ, ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ವಿರುದ್ಧ ಹೇಳಿಕೆ ನೀಡುತ್ತಲೇ ಬಂದಿದ್ದಾರೆ.

ಇದರ ವಿರುದ್ಧ ಈಗಾಗಲೇ ಹೆಗ್ಡೆ ಪರ ವಕೀಲರು ಕೋರ್ಟ್ ಮೊರೆ ಹೋಗಿದ್ದಾರೆ. ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಕುಟುಂಬದವರ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ಈಗಾಗಲೇ ಸಿವಿಲ್ ನ್ಯಾಯಾಲಯ ಮಹೇಶ್ ಶೆಟ್ಟಿ ಮತ್ತು ಸಂಗಡಿಗರಿಗೆ ಆದೇಶ ನೀಡಿತ್ತು.

ಹಾಗಿದ್ದರೂ ಮಹೇಶ್ ಶೆಟ್ಟಿ ಮತ್ತು ಸಂಗಡಿಗರು ಇದನ್ನು ಉಲ್ಲಂಘಿಸಿ ಪದೇ ಪದೇ ಹೆಗ್ಡೆಯವರ ವಿರುದ್ಧ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಹೀಗಾಗಿ ಇದರ ವಿರುದ್ಧ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಇದೀಗ ನ್ಯಾ. ಆರ್ ದೇವದಾಸ್ ನೇತೃತ್ವದ ಏಕಸದಸ್ಯ ಪೀಠ ಮಹೇಶ್ ಶೆಟ್ಟಿ ತಿಮರೋಡಿಗೆ ಎಚ್ಚರಿಕೆ ನೀಡಿದೆ. ಯಾವುದೇ ಕಾರಣಕ್ಕೂ ಧರ್ಮಾಧಿಕಾರಿಗಳ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದೆ. ಮುಂದೆ ಈ ರೀತಿ ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ