ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಇಲ್ಲ: ಹೈಕೋರ್ಟ್ ಆದೇಶ

ಗುರುವಾರ, 26 ಮಾರ್ಚ್ 2015 (17:21 IST)
ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆಗೆ ಹೈಕೋರ್ಟ್ ಇಂದು ನಿಷೇಧ ಹೇರಿದ್ದು, ಅನುಮತಿ ಇಲ್ಲದೆ ಬಳಸುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ  ಸರ್ಕಾರಕ್ಕೆ ಸೂಚನೆ ನೀಡಿದೆ.
 
ನಗರದ ಸುಮಂಗಳಾ ಎಂಬುವವರು ಮಸೀದಿಯೊಂದರಲ್ಲಿ ಕಳೆದ ಹಲವು ವರ್ಷಗಳಿಂದ ಧ್ವನಿವರ್ಧಕವನ್ನು ಬಳಸಲಾಗುತ್ತಿದ್ದು, ಅದರಿಂದ ಸುತ್ತಮುತ್ತಲಿನ ಸಾರ್ವಜನಿಕರಿಗೆ ಕಿರಿ ಉಂಟಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 
 
ಪ್ರಕರಣದ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದ್ದ ನ್ಯಾಯಾಲಯ, ಅನುಮತಿ ಇಲ್ಲದೆ ಬಳಸುವ ಧ್ವನಿವರ್ಧಕ ವಿಚಾರ ಸಂಬಂಧ ಅಸಮಧಾನ ವ್ಯಕ್ತಪಡಿಸಿದೆ. ಅಲ್ಲದೆ ಯಾವುದೇ ಧಾರ್ಮಿಕ ಸ್ಥಳಗಳವಾಗಿರಲಿ ಅನುಮತಿ ಇಲ್ಲದೆ ಧ್ವನಿವರ್ಧಕವನ್ನು ಬಳಸುವಂತಿಲ್ಲ ಎಂದಿದೆ. ಒಂದು ವೇಳೆ, ಅನುಮತಿ ಇಲ್ಲದೆ ಬಳಸುವವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ. 
 
ಇದೇ ವೇಳೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ರವಾನಿಸಿದೆ. ಹೈಕೋರ್ಟ್‌ನ ಈ ಆದೇಶವು ಎಲ್ಲಾ ಧಾರ್ಮಿಕ ಸ್ಥಳಗಳಿಗೆ ಅನ್ವಯವಾಗಲಿದೆ. 

ವೆಬ್ದುನಿಯಾವನ್ನು ಓದಿ