ಸರ್ಕಾರಿ ಕಚೇರಿಗಳಲ್ಲಿ ಫೋಟೋ -ವೀಡಿಯೋ ತೆಗೆಯುವುದಕ್ಕೆ ನಿಷೇಧ ಹೇರಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿತ್ತು. ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಾರಣ ನೀಡಿ ಕರ್ನಾಟಕ ಸರ್ಕಾರ ಈ ಆದೇಶ ನೀಡಿತ್ತು. ಅಲ್ಲದೇ ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಈ ಆದೇಶ ಪ್ರಕಟಿಸಿತ್ತು. ಆದರೀಗ ಈ ಆದೇಶ ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರ ಹಿಂಪಡೆದುಕೊಂಡಿದೆ.