ಕೆಆರ್‌ಎಸ್‌ಡ್ಯಾಂನಲ್ಲಿ ನೀರಿಲ್ಲ, ಕಬಿನಿ ನೀರು ಸಾಲಲ್ಲ: ಸಿಎಂ

ಬುಧವಾರ, 20 ಸೆಪ್ಟಂಬರ್ 2017 (18:30 IST)
ಕೃಷ್ಣರಾಜ ಸಾಗರ ಆಣೆಕಟ್ಟಿನಲ್ಲಿ ನೀರಿಲ್ಲ. ಕಬಿನಿ ಜಲಾಶಯದಲ್ಲಿರುವ ನೀರು ಸಾಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡಿಗೆ 195 ಟಿಎಂಸಿ ನೀರು ಬಿಡಬೇಕಾಗಿದೆ. ಸಂಕಷ್ಟಸೂತ್ರದಂತೆಯೂ ನೀರು ಬಿಡಲು ಸಾಧ್ಯವಾಗುತ್ತಿಲ್ಲ. ಕೆಆರ್‌ಎಸ್ ತುಂಬಿದಲ್ಲಿ ನೀರು ಬಿಡಲು ಸಾಧ್ಯ ಎಂದು ತಿಳಿಸಿದ್ದಾರೆ.
 
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಪ್ರತ್ರಿಕ್ರಿಯೆ ನೀಡಿದ ಅವರು, ರಾಜ್ಯದ ಪರ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಎಂದರು.
 
ಒಂದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ