ಶಶಿಕಲಾ ನಟರಾಜನ್,ಇಳವರಸಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

ಬುಧವಾರ, 6 ಸೆಪ್ಟಂಬರ್ 2023 (20:06 IST)
ಜೈಲಿನಲ್ಲಿ ಶಶಿಕಲಾ ನಟರಾಜನ್ ಗೆ ಐಷಾರಾಮಿ ಸೌಲಭ್ಯ ವಿಚಾರವಾಗಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಕೋರ್ಟ್ನಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ,ಶ್ಯೂರಿಟಿಗಳಿಗೂ ಕೂಡ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.ಇನ್ನು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ.ಆದ್ರೆ ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪವಿದ್ದು ಈ ಆದೇಶವನ್ನ ಹೊರಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ