ಉತ್ತರ ಕರ್ನಾಟಕ ನಿರ್ಲಕ್ಷಿಸಿದ ಸಿಎಂ: ಶೆಟ್ಟರ್ ಆರೋಪ

ಬುಧವಾರ, 5 ಸೆಪ್ಟಂಬರ್ 2018 (18:07 IST)
ಉತ್ತರ ಕರ್ನಾಟಕದ ಬಗ್ಗೆ ರಾಜ್ಯ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ. ಹೀಗಂತ ಮಾಜಿ ಮುಖ್ಯಮಂತ್ರಿ ಆರೋಪ ಮಾಡಿದ್ದಾರೆ.

 ರಾಜ್ಯದ ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕವನ್ನು ಕಡೆಗಣಿಸಿದೆ. ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿಯನ್ನು ರಾಜ್ಯ ಸರಕಾರ ಕಡೆಗಣಿಸಿದೆ. ಕೇಂದ್ರ ಸರಕಾರ ಬಿಡುಗಡೆಗೊಳಿಸಿರುವ ಸಿಆರ್ ಎಫ್ ಅನುದಾನವನ್ನು ರಾಜ್ಯ ಸರಕಾರ ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಇರುವ ಪಿಂಚಣಿಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರಕಾರದಿಂದ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುಳ್ಳಿನ ಮಹಾರಾಜರಾಗಿದ್ದಾರೆ. ಅವರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ ಎಂದು ದೂರಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ