ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕರ್ನಾಟಕ ಲಿಂಗಾಯುತ ಮುಖಂಡರ ಕಣ್ಣು

ಮಂಗಳವಾರ, 10 ಡಿಸೆಂಬರ್ 2019 (11:15 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈ ಹುದ್ದೆಯ ಮೇಲೆ ಉತ್ತರ ಕರ್ನಾಟಕ ಲಿಂಗಾಯುತ ಮುಖಂಡರ ಕಣ್ಣು ಬಿದ್ದಿದೆ ಎನ್ನಲಾಗಿದೆ.


ಉಪಚುನಾಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ತೆರವಾದ ಈ ಅಧ್ಯಕ್ಷ ಪಟ್ಟಕ್ಕೆ ಕೈ ನಾಯಕರ ನಡುವೆ ಲಾಬಿ ಶುರುವಾಗಿದೆ. ಡಿಕೆ ಶಿವಕುಮಾರ್ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ಅಲ್ಲದೇ ಸಿಎಂ ಬಿಎಸ್ ಯಡಿಯೂರಪ್ಪ ಲಿಂಗಾಯುತ ನಾಯಕನಾಗಿರೋ ಹಿನ್ನಲೆ ಲಿಂಗಾಯುತ ಮುಖಂಡನನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾ ಕೈ ಹೈಕಮಾಂಡ್ ಎಂಬ ಪ್ರಶ್ನೆ ಉದ್ಭವಿಸಿದ್ದು, ಆದಕಾರಣ  ಡಿಕೆಶಿ ಮತ್ತು ಲಿಂಗಾಯುತ ಮಖಂಡರ ಮಧ್ಯೆ ಅಧ್ಯಕ್ಷಗಿರಿಗೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ