ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ - ಬಿಜೆಪಿ ಮುಖಂಡ ಉಮೇಶ್ ಕತ್ತಿ ಒತ್ತಾಯ

ಶನಿವಾರ, 22 ಡಿಸೆಂಬರ್ 2018 (06:47 IST)
ಬೆಳಗಾವಿ : ಬೆಳಗಾವಿಯ ಅಧಿವೇಶನದಲ್ಲಿ ಸಿಎಂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಮುಖಂಡ ಉಮೇಶ್ ಕತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ ಎಂದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.


ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸದೆ ಅನಗತ್ಯವಾಗಿ ಅಧಿವೇಶನ ನಡೆಸಿದ್ದಾರೆ. ಸಿಎಂ ಅವರಿಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಆದ್ದರಿಂದ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳೆದ 10 ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಅಚಲನಾಗಿದ್ದೇನೆ ಎಂದು ಹೇಳಿದ್ದಾರೆ.


ರಾಜ್ಯದ ಉಸ್ತುವಾರಿ ವಹಿಸಿರುವ ಸಿಎಂ ಅವರಿಗೆ ಉತ್ತರ ಕರ್ನಾಟಕ ಅಗತ್ಯವಿಲ್ಲದಿದ್ದರೆ ದಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಆ ಮೂಲಕ ರಾಜ್ಯ ಇಬ್ಭಾಗ ಮಾಡುವ ಬಗ್ಗೆ ಸ್ಪಷ್ಟಪಡಿಸಿ, ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಕ್ಕರೆ ಕಾರ್ಖಾನೆಗಳು ಇದ್ದು, ಅಭಿವೃದ್ಧಿಯ ವಿಚಾರವಾಗಿ ಕೆಲ ಸರ್ಕಾರ ಇಲಾಖೆಯನ್ನು ಸುವರ್ಣ ಸೌಧಕ್ಕೆ ವರ್ಗಾವಣೆ ಮಾಡಲು ಮನವಿ ಮಾಡಲಾಗಿತ್ತು. ಆದರೆ ಇದು ಯಾವುದು ಆಗಿಲ್ಲ. ರಾಜ್ಯದಲ್ಲಿ ಸರ್ಕಾರವಿದ್ದರು ಸರಿಯಾದ ಅಭಿವೃದ್ಧಿ ಯೋಜನೆಗಳು ಜಾರಿ ಆಗುತ್ತಿಲ್ಲ. ಆದ್ದರಿಂದ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ಬಗ್ಗೆ ಒತ್ತಾಯ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ