ಬಿಪಿಎಲ್ ಫಲಾನುಭವಿಗಳಿಗೆ ಪಡಿತರ ಬದಲು ಹಣ ನೀಡಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳವಾರ, 31 ಜನವರಿ 2017 (13:52 IST)
ರಾಜ್ಯದಲ್ಲಿ ಪಡಿತರದಾರರಿಗೆ ನೀಡುತ್ತಿರುವ ಆಹಾರ ಧಾನ್ಯದ ಬದಲು ನಗದು ಹಣ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
 
ಬಿಪಿಎಲ್ ಕಾರ್ಡ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿ, ಮಾತನಾಡಿದ ಅವರು ಹಣದ ಬದಲು ಪಡಿತರವನ್ನೇ ಕೊಡಿ ಎಂದು ಜನ ಆಗ್ರಹಿಸಿದ್ದಾರೆ ಎಂದರು. 
 
ಹಣ ಕೊಟ್ಟರೆ ಫಲಾನುಭವಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಯಾವುದೇ ಕಾರಣಕ್ಕೂ ನಗದು ಹಣ ಕೊಡಲ್ಲ. ಯಾವುದೇ ಕಾರಣಕ್ಕೂ ಬಿಪಿಎಲ್ ಪಡಿತದಾರರಿಗೆ ನಗದು ಹಣ ನೀಡಬೇಡಿ ಎಂದು ಆಹಾರ ಮತ್ತು ನಾಗರಿಕ ಸಚಿವ ಯು.ಟಿ.ಖಾದರ್ ಅವರಿಗೆ ಸೂಚನೆ ನೀಡಿದರು. 
 
ನಮ್ಮ ಸರಕಾರ ಬಂದ ಮೇಲೆ ಕರ್ನಾಟಕ ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂದು ಒಂದು ಕೋಟಿಗೂ ಅಧಿಕ ಕುಟುಂಬಗಳಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಬಿಪಿಎಲ್ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ, ರಿಯಾಯಿತಿ ದರದಲ್ಲಿ ಉಪ್ಪು, ಸಕ್ಕರೆ, ಅಡುಗೆ ಎಣ್ಣೆ ಕೊಡುತ್ತಿದ್ದೇವೆ. ಜೊತೆಗೆ 33 ರೂಪಾಯಿ ದರದಲ್ಲಿ ಒಂದು ಕೆಜೆ ತೊಗರಿಬೇಳೆ ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ