ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

ಭಾನುವಾರ, 14 ಮೇ 2023 (08:56 IST)
ಚಿಕ್ಕಮಗಳೂರು : 20 ವರ್ಷಗಳಿಂದ ಶಾಸಕರಾಗಿದ್ದು ಮೊದಲ ಬಾರಿಗೆ ಸೋಲಿನ ಕಹಿ ಕಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಜನಾದೇಶಕ್ಕೆ ತಲೆಬಾಗುತ್ತೇನೆ. ಇದು ಸಿದ್ಧಾಂತದ ಸೋಲಲ್ಲ. ವೈಯಕ್ತಿಕ ಸೋಲು ಎಂದು ತಿಳಿಸಿದ್ದಾರೆ.
 
ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶ ಅಂತಿಮವಾಗಿ ಸಿ.ಟಿ.ರವಿ ಸೋಲು ಎಂದು ರಿಸಲ್ಟ್ ಹೊರಬರುತ್ತಿದ್ದಂತೆ ಶಾಸಕ ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ 1999ರ ಬಳಿಕ ಮೊದಲ ಬಾರಿಗೆ ಬಿಜೆಪಿ ವೈಟ್ ವಾಶ್ ಆಗಿದೆ. 1999ರಲ್ಲೂ ಜಿಲ್ಲೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. ಆ ಬಳಿಕ ಈಗ ಮತ್ತೆ ಐದಕ್ಕೆ ಐದು ಕ್ಷೇತ್ರಗಳು ಕೈ ಪಾಲಾಗಿವೆ. ಜಿಲ್ಲೆಯಲ್ಲಿ ಬಿಜೆಪಿ ವೈಟ್ ವಾಶ್ ಫಲಿತಾಂಶ ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ