ಲೋಕಾಯುಕ್ತ ವರದಿ ಅಲ್ಲ, ಸಿದ್ದರಾಮಯ್ಯ ಬಚಾವೋ ವರದಿ: ಆರ್‌ ಅಶೋಕ್ ವ್ಯಂಗ್ಯ

Sampriya

ಶುಕ್ರವಾರ, 24 ಜನವರಿ 2025 (19:51 IST)
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ನಂತರ ಮಾನ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ತಮ್ಮ ಎರಡನೇ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋ‍ಪ ಮಾಡಿದ್ದಾರೆ.

ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ನೇತೃತ್ವದ ತಂಡ 400ಪುಟಗಳ ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ. ಇದರಲ್ಲಿ ಅಧಿಕಾರಿಗಳ ಲೋಪವಿದೆಯೇ ಹೊರತು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪ್ರಭಾವ ಬೀರಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಪ್ರಶ್ನಿಸಿ ಆರ್‌ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ‌ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ನಂತರ ಮಾನ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ತಮ್ಮ ಎರಡನೇ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ.

ಮೂಡಾ ಹಗರಣದಲ್ಲಿ ಲೋಕಾಯುಕ್ತ ನಡೆಸಿರುವ ತನಿಖೆ ಕಾಟಾಚಾರದ ತನಿಖೆಯಾಗಿದ್ದು, ಲೋಕಾಯುಕ್ತ ಸಲ್ಲಿಸಿರುವ ವರದಿ ಕೇವಲ ಸಿದ್ದರಾಮಯ್ಯ ಬಚಾವೋ ವರದಿ ಅಷ್ಟೇ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ