ಸಿದ್ದರಾಮಯ್ಯ ಅಲ್ಲ, ಬೆಂಕಿ ರಾಮಯ್ಯ ಎಂದ ಆರ್.ಅಶೋಕ್

ಶನಿವಾರ, 13 ಜನವರಿ 2018 (15:31 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ, ಬೆಂಕಿ ರಾಮಯ್ಯ. ಅವರನ್ನು ಮನೆಗೆ ಕರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ವ್ಯಂಗವಾಡಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಧರ್ಮದ ಬೆಂಕಿ ಇಟ್ಟು ಮನಸ್ಸುಗಳನ್ನು ಬೇರೆ ಬೇರೆ ಮಾಡುತ್ತಾರೆ. ಆದ್ದರಿಂದ ಅವರನ್ನು ಮನೆಗೆ ಕರೆಯಬಾರದು ಎಂದು ತಿಳಿಸಿದ್ದಾರೆ.
 
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದ್ದ 3 ಲಕ್ಷ ಕೋಟಿ ಅನುದಾನ ಕಾಂಗ್ರೆಸ್‌ ಮುಖಂಡರ ಮನೆ ಸೇರಿದೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ