ಉಗ್ರವಾದಿಗಳು ಎಂದು ಹೇಳಿಲ್ಲ– ಉಲ್ಟಾ ಹೊಡೆದ ಸಿದ್ದರಾಮಯ್ಯ

ಗುರುವಾರ, 11 ಜನವರಿ 2018 (13:50 IST)
ಆರ್‍ಎಸ್‍ಎಸ್, ಬಿಜೆಪಿಯವರು ಉಗ್ರವಾದಿಗಳು ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. 
 
ಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್, ಬಿಜೆಪಿಯವರು ಉಗ್ರವಾದಿಗಳೆಂದು ಹೇಳಿಲ್ಲ.  ಹಿಂದುತ್ವವನ್ನು ಉಗ್ರವಾಗಿ ಪ್ರತಿಪಾದಿಸುತ್ತಾರೆ ಎಂದು ಹೇಳಿದ್ದೇನೆ ಎನ್ನುವ ಮೂಲಕ ಸಮಜಾಯಿಷಿ ನೀಡಿ ನಿನ್ನೆ ನೀಡಿದ್ದ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ.
 
ಯಾರೇ ಆಗಲಿ ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದೇನೆಂದು ಹೇಳಿದ್ದಾರೆ. ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡುತ್ತಿದ್ದೇವೆಯೇ ಹೊರತು ಪಕ್ಷದ ಪರ ಪ್ರಚಾರ ಮಾಡುತ್ತಿಲ್ಲ ಎಂದು ಟೀಕೆಗಳಿಗೆ ಉತ್ತರಿಸಿದ್ದಾರೆ.
 
ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಕಹಿ ಉಣಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲೂ ಸೋಲಿನ ರುಚಿ ತೋರಿಸುತ್ತೇವೆ. ಚಾಮುಂಡೇಶ್ವರಿ, ಗುಂಡ್ಲುಪೇಟೆ, ನಂಜನಗೂಡು ಕ್ಷೇತ್ರದಲ್ಲಿ ಮತ್ತೆ ನಾವೇ ಗೆಲ್ಲುತ್ತೇವೆ. ವಿ.ಸೋಮಣ್ಣ ಅವರು ರಾಜಕೀಯದಲ್ಲಿ ನಿವೃತ್ತಿ ಹೊಂದುವುದು ಬೇಡ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ