ನೋಟ್ ಬ್ಯಾನ್: ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರಕಾರ ಚಿಂತನೆ

ಮಂಗಳವಾರ, 22 ನವೆಂಬರ್ 2016 (11:55 IST)
500, 1000 ಮುಖಬೆಲೆಯ ನೋಟು ನಿಷೇಧವನ್ನು ಪ್ರಶ್ನಿಸಿ ರಾಜ್ಯ ಸರಕಾರ ಕೋರ್ಟ್ ಮೆಟ್ಟಿಲೇರಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
 
ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಏಕಾಏಕಿ 500, 1000 ಮುಖಬೆಲೆಯ ನೋಟು ನಿಷೇಧ ಮಾಡಿರುವುದನ್ನು ಪ್ರಶ್ನಿಸಿ ರೈತರು ಹಾಗೂ ಸಹಕಾರಿ ಬ್ಯಾಂಕ್‌ಗಳ ಮೂಲಕ ನ್ಯಾಯಲಯದ ಮೊರೆ ಹೋಗಲು ರಾಜ್ಯ ಸರಕಾರ ಚಿಂತಿಸುತ್ತಿದೆ.
 
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಹಣಕಾಸು ಸಚಿವರಿಗೆ ಮೂರು ಬಾರಿ ಪತ್ರ ಬರೆದಿದ್ದು, ಹಣ ಪಾವತಿ ಮಾಡಲು ರೈತರಿಗೆ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
 
ಕಾಳುಧನಿಕರಿಗೆ ಬಿಸಿ ಮುಟ್ಟಿಸುವ ಉದ್ದೇಶದಿಂದ ನವೆಂಬರ್ 8 ರ ಮಧ್ಯರಾತ್ರಿಯಿಂದ 500, 1000 ಮುಖಬೆಲೆಯ ನೋಟುಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿಷೇಧಿಸಿತ್ತು. ಕೇಂದ್ರದ ಈ ನಡೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ