ನೋಟ್ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಸದನ ನಡೆಸಲು ಬಿಡದೆ ಸಂಸತ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿವೆ. ಅವರೇಕೆ ಪ್ರತಿಭಟನೆ ಮಾಡುತ್ತಿದ್ದಾರೆ ಅಂತ ನಮಗೂ ಗೊತ್ತಿಲ್ಲ. ಆದರೆ, ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿ ಗಾಂಧಿ ತತ್ವಗಳಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟಲು ಕೇಂದ್ರ ಸರಕಾರ ಕ್ರಾಂತಿಕಾರಕ ನಿರ್ಧಾರ ಕೈಗೊಂಡಿದೆ. ಆದರೆ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸುತ್ತಿವೆ. ಕಪ್ಪು ಹಣ ಮಟ್ಟ ಹಾಕಬಾರದು ಎನ್ನುವುದು ಅವರ ನಿಲುವು ಎಂದು ಆರೋಪಿಸಿದರು.