ಬೆಂಗಳೂರು: ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂಬುದು ರಾಜ್ಯಕ್ಕೆ ತಿಳಿದಂತ ವಿಚಾರ. ವಿದ್ಯಾರ್ಥಿ ಒಬ್ಬ ಸಚಿವರಿಗೆ ಕನ್ನಡ ಬರೋದಿಲ್ಲ ಅಂತ ಹೇಳಿದ್ದಕ್ಕೆ ಅವನ ಮೇಲೆ ಕ್ರಮ ಕೈಗೊಳ್ಳುವಂತೆ ಮಾಧ್ಯಮಗಳ ಎದುರೇ ಸಚಿವರು ಹೇಳಿದ್ದು ಇವರು ಎಷ್ಟು ಅಪ್ರಾಮಾಣಿಕರು ಎಂಬುದು ತೋರಿಸುತ್ತದೆ ಎಂದು ಶಾಸಕ ಬಸನಗೌಡ ಯತ್ನಾಳ್ ಅವರು ಕಿಡಿಕಾರಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವಾಗ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ತಮಾಷೆ ಮಾಡಿದ ಘಟನೆ ನಡೆದಿದೆ. ಇದಕ್ಕೆ ಗರಂ ಆದ ಮಧು ಬಂಗಾರಪ್ಪ ವಿದ್ಯಾರ್ಥಿ ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಸನಗೌಡ ಯತ್ನಾಳ್ ಬರೆದು, ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ
ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂಬುದು ರಾಜ್ಯಕ್ಕೆ ತಿಳಿದಂತ ವಿಚಾರ. ವಿದ್ಯಾರ್ಥಿ ಒಬ್ಬ ಸಚಿವರಿಗೆ ಕನ್ನಡ ಬರೋದಿಲ್ಲ ಅಂತ ಹೇಳಿದ್ದಕ್ಕೆ ಅವನ ಮೇಲೆ ಕ್ರಮ ಕೈಗೊಳ್ಳುವಂತೆ ಮಾಧ್ಯಮಗಳ ಎದುರೇ ಸಚಿವರು ಹೇಳಿದ್ದು ಇವರು ಎಷ್ಟು ಅಪ್ರಾಮಾಣಿಕರು ಎಂಬುದು ತೋರಿಸುತ್ತದೆ.
ರಾಜ್ಯದ ಶಿಕ್ಷಣ ಸಚಿವರು ಕನ್ನಡವನ್ನು ಸ್ಫುಟವಾಗಿ ಮಾತನಾಡಲು, ಬರೆಯಲು, ಓದಲು, ಸಂವಹನ ಮಾಡಲು ಕಲಿಯಬೇಕು. ವಿದ್ಯಾರ್ಥಿಗಳಾಗಲಿ, ಪತ್ರಕರ್ತರಿಂದಾಗಲಿ ರಚನಾತ್ಮಕ ಟೀಕೆಗಳನ್ನು ಸ್ವೀಕರಿಸಬೇಕು.
ಪ್ರಜಾಪ್ರಭುತ್ವ ದಲ್ಲಿ ವಿದ್ಯಾರ್ಥಿಗಳಿಗೂ ಸೇರಿದಂತೆ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿರುತ್ತದೆ., ಇದನ್ನು ದಮನಿಸುವುದು ಹೇಯ ಹಾಗೂ ಖಂಡನೀಯ.
ಸಚಿವರ ಅಸಮರ್ಥತೆಯನ್ನು ಪ್ರಶ್ನಿಸಿದ ವಿದ್ಯಾರ್ಥಿಯ ಮೇಲೆ ಯಾವುದೇ ಕ್ರಮ ಕೈಗೊಳ್ಳಬಾರದು