ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಬಿಜೆಪಿ ವಕ್ತಾರನಿಗೆ ನೋಟಿಸ್

ಗುರುವಾರ, 23 ಮಾರ್ಚ್ 2023 (08:18 IST)
ಚಾಮರಾಜನಗರ : ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರನಿಗೆ ನೋಟಿಸ್ ನೀಡಲಾಗಿದೆ.

ಚಾಮರಾಜನಗರ ಜಿಲ್ಲಾ ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ಗೆ ನೋಟೀಸ್ ಜಾರಿ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಮೈಸೂರು ವಿಭಾಗದ ಉಸ್ತುವಾರಿ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಬೇಡ ಎಂದು ಬಿಜೆಪಿ ವಕ್ತಾರ ಶಿವಕುಮಾರ್ ಒತ್ತಾಯ ಮಾಡಿದ್ದರು. 

ಇದು ಜಿಲ್ಲಾ ಬಿಜೆಪಿಯ ನಿಲುವಲ್ಲ, ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಜಿಲ್ಲಾ ಬಿಜೆಪಿಗೂ ಸಂಬಂಧವಿಲ್ಲ. ಶಿವಕುಮಾರ್ ಹೇಳಿಕೆಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಶಿವಕುಮಾರ್ಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಅವರ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ