ಕನ್ನಡ ಭಾಷೆ ಬೋಧಿಸದ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಲು ಸೂಚನೆ

ಶುಕ್ರವಾರ, 12 ಅಕ್ಟೋಬರ್ 2018 (14:32 IST)
ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕೇಂದ್ರೀಯ ವಿದ್ಯಾಲಯಗಳು ಮತ್ತು ಸಿ.ಬಿ.ಎಸ್.ಇ. ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧನೆ ಮಾಡುವುದು ಕಡ್ಡಾಯವಾಗಿದೆ. ಇದನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ಧರಾಮಯ್ಯ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2015ರ ಕನ್ನಡ ಭಾಷಾ ಅಧಿನಿಯಮದನ್ವಯ ಕನ್ನಡ ಪ್ರಥಮ ಅಥವಾ ದ್ವಿತೀಯ ಭಷೆಯಲ್ಲಿ ಬೋಧನೆ ಮಾಡಬೇಕು.

ಕಲಬುರಗಿಯಲ್ಲಿ ಕೆಲವು ಸಿ.ಬಿ.ಎಸ್.ಇ. ಶಾಲೆಗಳು ಇದನ್ನು ಪಾಲಲಿಸುತ್ತಿಲ್ಲ ಎಂಬ ದೂರುಗಳು ಪ್ರಾಧಿಕಾರಕ್ಕೆ ಬಂದಿವೆ. ಇಂತಹ ಶಾಲೆಗಳ ಮೇಲೆ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ