ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 'ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕ ಸೇರಿದಂತೆ ಒಟ್ಟಾರೆ 15,000 ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. 2023-24ನೇ ಸಾಲಿಗೆ ಶಿಕ್ಷಕರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.
ಜಿಲ್ಲಾವಾರು ಶಿಕ್ಷಕರ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯತೆ ಅನುಸಾರ ಹುದ್ದೆಗಳನ್ನು ಜಿಲ್ಲೆಗಳ ನಡುವೆ ಹಂಚಿಕೆ ಮಾಡಲಾಗಿದೆ. ಎಂಜಿನಿಯರಿಂಗ್, ಬಯೋಟೆಕ್ನಾಲಜಿ ಪದವೀಧರರಿಗೆ ಹೊಸದಾಗಿ ಅವಕಾಶ ನೀಡಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಶೇ.1ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ' ಎಂದು ಸಚಿವರು ತಿಳಿಸಿದರು.