ಡಿ ಗ್ರೂಪ್ ನೌಕರ ಹುದ್ದೆಗೆ ಎಸ್ ಎಸ್ ಎಲ್ ಸಿ ಕಡ್ಡಾಯ-ರಾಜ್ಯ ಸರ್ಕಾರದಿಂದ ಅಧಿಸೂಚನೆ

ಬುಧವಾರ, 3 ಜುಲೈ 2019 (13:04 IST)
ಬೆಂಗಳೂರು : ಇನ್ನುಮುಂದೆ  ಡಿ ಗ್ರೂಪ್ ನೌಕರ ಹುದ್ದೆಗೆ ನೇಮಕ ಆಗಬೇಕಾದರೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು ಎಂಬ ಕಡ್ಡಾಯ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.




ಈ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಕಾಯಿದೆ 1978 ರಲ್ಲಿ ತಿದ್ದುಪಡಿ ಮಾಡುವಂತೆ ಜು. 1 ರಂದು ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು,  ಗ್ರೂಪ್ ಡಿ ಸೇವೆ ಮತ್ತು ಮೇಲ್ಪಟ್ಟ ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಗೆ ಎಸ್ ಎಸ್ ಎಲ್ ಸಿ ಗಿಂತ ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಪರಿಗಣಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.


ಈ ಹಿಂದೆ ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ದಲಾಯತ್ ಗಳು, ವಾಹನ ಚಾಲಕರು, ಜವಾನ ಹುದ್ದೆ ಸೇರಿ ನಾನಾ ಗ್ರೂಪ್ ಡಿ ಹುದ್ದೆಗಳ ನೇಮಕದಲ್ಲಿ 7 ನೇ ತರಗತಿ ತೇರ್ಗಡೆಯನ್ನೂ ಪರಿಗಣಿಸಲಾಗುತ್ತಿತ್ತು. ಆದರೆ ಇದರಿಂದ ಸಮಸ್ಯೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಡಿ ಗ್ರೂಪ್ ನೌಕರ ಹುದ್ದೆಗೆ ಎಸ್ ಎಸ್ ಎಲ್ ಸಿ ಆಗಿರಲೇ ಬೇಕು ಎಂಬ ಕಡ್ಡಾಯ ನಿಯಮವನ್ನು ರಾಜ್ಯ ಸರ್ಕಾರ ಇದೀಗ ಜಾರಿಗೊಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ