ನ.26 ಹೈವೇ ಬಂದ್

ಬುಧವಾರ, 17 ನವೆಂಬರ್ 2021 (14:59 IST)
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ನಿರಂತರ ಹೋರಾಟ ವರ್ಷ ಕಳೆದರೂ ಕೇಂದ್ರ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನ.26ಕ್ಕೆ ಬೆಂಗಳೂರು (Bengaluru) ನಗರ, ಗ್ರಾಮಾಂತರ, ಕೋಲಾರ (Kolar), ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-7ನ್ನು (National Highway) ನಗರದ ಹೊರ ವಲಯದ ಚದಲು ಪುರದಲ್ಲಿ ಕ್ರಾಸ್‌ನಲ್ಲಿ ತಡೆದು ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಹೋರಾಟ ಕರ್ನಾಟಕ (karnataka) ಜಿಲ್ಲಾ ಸಮಿತಿ ಎಚ್ಚರಿಸಿದೆ.ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ, ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಹ ಸಂಚಾಲಕ ಚನ್ನರಾಯಪ್ಪ, ಕೆ.ಎಸ್‌.ಪುಟ್ಟಣಯ್ಯ ಬಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ವೆಂಕಟಸ್ವಾಮಿ, ರೈಥ ಸಂಘದ ಮುನಿಕೆಂಪಯ್ಯು, ಕರವೇ ರಾಮೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ರವಿಕುಮಾರ್‌, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಗುಡಿಬಂಡೆ ರಾಮನಾಥ್‌, ರಾಮಾಂಜಿನಪ್ಪ ಸೇರಿದಂತೆ ಮತ್ತಿತರರು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ