ಇದೀಗ ಪಕ್ಕಾ! ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬುಧವಾರ, 10 ಮೇ 2017 (07:08 IST)
ಬೆಂಗಳೂರು: ಅದೆಷ್ಟೋ ವಿದ್ಯಾರ್ಥಿಗಳ ಭವಿಷ್ಯ ನಾಳೆ ಬಯಲಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದೋ ನಾಳೆಯೋ ಎಂದು ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ.

 
ನಾಳೆ ಮಧ್ಯಾಹ್ನದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಪಿಯು ಬೋರ್ಡ್ ಖಚಿತಪಡಿಸಿದೆ. ಇದಕ್ಕೂ ಮೊದಲು ಇಂದು ಫಲಿತಾಂಶ ಪ್ರಕಟವಾಗುತ್ತದೆ ಎಂದು ಗೊಂದಲವುಂಟಾಗಿತ್ತು.

www.pue.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಮಾರ್ಚ್ 9 ರಿಂದ 27 ರವರೆಗೆ ಪರೀಕ್ಷೆ ನಡೆದಿತ್ತು. ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ಪರೀಕ್ಷೆ ಆರಂಭವಾದ ನಂತರ ವ್ಯಾಟ್ಸಪ್ ನಲ್ಲಿ ಹರಿದಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಹಿತಕರ ಘಟನೆ ನಡೆಯದೆ ಯಶಸ್ವಿಯಾಗಿ ಪರೀಕ್ಷೆ ನಡೆದಿತ್ತು. ಮೇ 12 ರಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ