ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 2,35,532 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಈ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 4,93,198ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,35,939 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,83,60,710ಕ್ಕೆ ತಲುಪಿದೆ.
ಈವರೆಗೆ ದೇಶದಲ್ಲಿ 1,65,04,87,260 ಜನರಿಗೆ ಲಸಿಕೆ ನೀಡಲಾಗಿದೆ.