ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಇಲ್ಲಿಯವರೆಗೆ, 90 ರೋಗಿಗಳನ್ನು ಚೇತರಿಸಿಕೊಂಡ ನಂತರ ಬಿಡುಗಡೆ ಮಾಡಲಾಗಿದೆ ಅಂಥ ತಿಳಿಸಿದೆ.
ಈ ನಡುವೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಹೊಸ ಕೋವಿಡ್ ಪ್ರಕತಗಳು ಪ್ರಕರಣಗಳು ದಾಖಲಾಗಿದ್ದು, ಇದೇ ವೇಳೇ ಕೋವಿಡ್‌ನಿಂದ 318 ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ 6,906 ಮಂದಿ ಸೋಂಕಿನಿಂದ ಚೇತರಿಕೆಗಳನ್ನು ಕಂಡಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಮಾಡಿದೆ. ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 78,190 ಆಗಿದೆ; 575 ದಿನಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆಯಂತೆ. ಈ ನಡುವೆ ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ದಾಖಲಾಗಿದೆ ಅಂತ ಇಲಾಖೆ ತಿಳಿಸಿದೆ.