ಒತ್ತುವರಿ : ಪ್ರಕರಣದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಬುಧವಾರ, 11 ಜನವರಿ 2023 (09:07 IST)
ಮಡಿಕೇರಿ : ಬಹುತೇಕ ಅರಣ್ಯ ಪ್ರದೇಶದಿಂದಲೇ ಕೂಡಿರುವ ಕೊಡಗು ಜಿಲೆಯಲ್ಲಿ ಸಾಕಷ್ಟು ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಆದರೆ ಆಳುವವರಿಂದಲೇ ಅರಣ್ಯ ಒತ್ತುವರಿಯಾಗಿದೆ ಎಂದು ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಹೀಗಾಗಿ ಪ್ರಕರಣ ಕುರಿತು ವರದಿ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕಾಶ್ಮೀರದಂತೆ ಕಾಣುವ ಕೊಡಗು ಜಿಲ್ಲೆ ಬಹುತೇಕ ಬೆಟ್ಟಗುಡ್ಡಗಳಿಂದಲೇ ಕೂಡಿರುವ ಪ್ರದೇಶ. ಆದರೆ ನೀವು ನೋಡುತ್ತಿರುವ ಈ ಪ್ರದೇಶ ಸದ್ಯಕ್ಕೆ ಊರಾಗಿದ್ದರೂ, ಇದು ಅರಣ್ಯ ಪ್ರದೇಶ ಎನ್ನಲಾಗುತ್ತಿದೆ.

ಅದನ್ನು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ 200 ಕ್ಕೂ ಹೆಚ್ಚು ಜನರು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಕಾವೇರಿ ಸೇನೆಯ ಮುಖಂಡ ರವಿ ಚಂಗಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. 

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿದೆ. ಮಡಿಕೇರಿ ತಾಲ್ಲೂಕಿನ ಕರ್ಣಂಗೇರಿ ಗ್ರಾಮದ ಸರ್ವೇ ನಂಬರ್ 289/7 ರಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸೇರಿದಂತೆ 200 ಜನರು ಅಕ್ರಮವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ದೂರಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ