‘ಸಂತ್ರಸ್ತರಿಗೆ ಪರಿಹಾರ ತಲುಪದಿದ್ದರೆ ಅಧಿಕಾರಿಗಳಿಗೆ ಸಸ್ಪೆಂಡ್ ಶಿಕ್ಷೆ’

ಸೋಮವಾರ, 28 ಅಕ್ಟೋಬರ್ 2019 (18:12 IST)
ನೆರೆ ಸಂತ್ರಸ್ತರಿಗೆ ಪರಿಹಾರ ತಲುಪದಿದ್ದರೆ ಅಧಿಕಾರಿಗಳನ್ನೇ ಅಮಾನತ್ತು ಮಾಡಲಾಗುತ್ತದೆ.

ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಮನೆಗಳನ್ನು ಕಳೆದುಕೊಂಡಿರುವ ಯಾವುದೇ ಕುಟುಂಬವೂ ಸರ್ಕಾರ ನೀಡುವ ಪರಿಹಾರ ಮತ್ತು ಇತರೆ ಸೌಲಭ್ಯಗಳಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ನಿಜವಾದ ಸಂತ್ರಸ್ತರು ಪರಿಹಾರದಿಂದ ವಂಚಿತಗೊಂಡರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ಹೀಗಂತ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ರು.

ಬೆಳಗಾವಿ ಜಿಲ್ಲೆಯ ಪ್ರವಾಹಬಾಧಿತ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಹಿರೇಬಾಗೇವಾಡಿ ಗ್ರಾಮದಲ್ಲಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದರು.

ಪ್ರತಿಯೊಂದು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಈಗಾಗಲೇ ಸಾಕಷ್ಟು ಹಣವನ್ನು ಬಿಡುಗಡೆಗೊಳಿಸಿದೆ.

ಮನೆಗಳು ಮತ್ತು ಬೆಳೆಹಾನಿಯನ್ನು ಸಮೀಕ್ಷೆ ಮಾಡುವ ಅಧಿಕಾರಿಗಳು ಸರ್ಕಾರದ ಆಶಯವನ್ನು ಅರಿತುಕೊಂಡು ಕೆಲಸ ಮಾಡಬೇಕು. ಒಂದು ವೇಳೆ ಅರ್ಹ ಕುಟುಂಬಗಳು ಪರಿಹಾರದಿಂದ ವಂಚಿತಗೊಂಡಿದ್ದರೆ ಅಂತಹ ಕುಟುಂಬಗಳಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನು ನೀಡಿದರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ