ಬೆಂಗಳೂರು: ಕ್ಷೇತ್ರಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆಯಿದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದರು.
ರೈತರಿಗೆ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಇನ್ಪುಟ್ ಸಬ್ಸಿಡಿ ಬಗ್ಗೆ ಮಾಧ್ಯಮಗಳ ಮೂಲಕ ರೈತರಿಗೆ ಅಧಿಕಾರಿಗಳು ಪ್ರಚುರ ಪಡಿಸಬೇಕು. ಹಿಂಗಾರು ಹಂಗಾಮಿಗೆ ಎಲ್ಲಿಯೂ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕಾಳಸಂತೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ನಿಗಾ ವಹಿಸಬೇಕು. ಡಿಎಪಿ ರಸಗೊಬ್ಬರಕ್ಕೆ ರೈತರು ಹೆಚ್ಚಿನ ಅವಲಂಬಿತರಾಗದೇ ಕಾಂಪ್ಲೆಕ್ಸ್ ಗೊಬ್ಬರಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕೃಷಿ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು