ನಾಳೆ ಒಕ್ಕಲಿಗರ ಸಂಘದ ಚುನಾವಣೆ

ಶನಿವಾರ, 11 ಡಿಸೆಂಬರ್ 2021 (18:21 IST)
ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 35 ಸದಸ್ಯರ ಆಯ್ಕೆಗೆ ಸಂಬಂಧಿಸಿದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.ಬೆಂಗಳೂರಿನ 141 ಅಭ್ಯರ್ಥಿಗಳು ಸೇರಿದಂತೆ 221 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಎಡಗೈ ಕಿರುಬೆರಳಿಗೆ ಶಾಹಿ ಹಾಕಲಾಗುತ್ತದೆ.
 
ಬೆಂಗಳೂರಿನ 389 ಸೇರಿದಂತೆ 1049 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಹಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ 1,97,125 ಮತದಾರರು 15 ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗಿದೆ. ಒಟ್ಟು 35 ನಿರ್ದೇಶಕರನ್ನು 5,20,721 ಮತದಾರರು ಆಯ್ಕೆ ಮಾಡಬೇಕಾಗಿದೆ.
 
ರಾಜ್ಯದ 11 ಜಿಲ್ಲೆಗಳಿಂದ 35 ಸದಸ್ಯರನ್ನು ಆಯ್ಕೆ ಮಾಡಬೇಕಾಗುತ್ತದೆ. ಮತ ಎಣಿಕೆಯು ಡಿ.15ರಂದು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯುತ್ತದೆ. ಬೆಂಗಳೂರಿನ ಮತ ಎಣಿಕೆಯು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಉಳಿದ ಜಿಲ್ಲೆಗಳ ಮತ ಎಣಿಕೆಯು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ