ಬೆಂಗಳೂರು : ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ.
ರಾಜ್ಯದ ಜನಸಂಖ್ಯೆಯಲ್ಲಿ ಶೇ.16ರಷ್ಟು ಒಕ್ಕಲಿಗ ಸಮುದಾಯದ ಜನಸಂಖ್ಯೆ ಇದ್ದು, ಶೇ.4 ಮೀಸಲಾತಿ ಕಡಿಮೆಯಾಗಿದೆ. ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿನ 3ಂ ಅಡಿಯಲ್ಲಿ ಒಕ್ಕಲಿಗರ ಸಮುದಾಯ ಸೇರಿಸಲಾಗಿದೆ. 3ಂ ನಲ್ಲಿ ಒಕ್ಕಲಿಗರ ಉಪ ಪಂಗಡಗಳು ಹಾಗೂ ಇತರೆ ಜಾತಿಗಳೂ ಸೇರಿವೆ ಎಂದು ಹೇಳಿದೆ.
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಒಕ್ಕಲಿಗರ ಸಂಘ ಸ್ವಾಗತಿಸುತ್ತದೆ. ಅದೇ ರೀತಿ 3ಎ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.10ಕ್ಕೆ ಹೆಚ್ಚಿಸುವ ಮೂಲಕ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಸಂಘ ಮನವಿ ಮಾಡಿದೆ.