ಒಮೈಕ್ರೋನ್ ಬಂದಿದ ವೈದ್ಯರಿಗೆ ಮತ್ತೆ ಪಾಸಿಟಿವ್

ಮಂಗಳವಾರ, 7 ಡಿಸೆಂಬರ್ 2021 (14:03 IST)
ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದ ಬೆಂಗಳೂರಿನ ವೈದ್ಯರ ವರದಿ ಮತ್ತೆ ಪಾಸಿಟಿವ್ ಬಂದಿದೆ.ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಶನ್‌ನಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
 
15 ದಿನಗಳ ಬಳಿಕ ವೈದ್ಯರಿಗೆ ಮತ್ತೊಮ್ಮೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಸೋಮವಾರ ನಡೆಸಿದ ಪರೀಕ್ಷೆಯ ವರದಿ ಮತ್ತೆ ಪಾಸಿಟಿವ್ ಬಂದಿದೆ. ಆದ್ದರಿಂದ ಡಿಸ್ಚಾರ್ಜ್ ಮಾಡದೇ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.ವೈದ್ಯರಿಗೆ ಕೋವಿಡ್ ಸೋಂಕು ತಗುಲಿದ ಬಳಿಕ ಅವರ ಪ್ರಾಥಮಿಕ ಮತ್ತು ಎರಡನೇ ಹಂತದ ಸಂಪರ್ಕದಲ್ಲಿದ್ದವರ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಎಲ್ಲರ ವರದಿ ನೆಗೆಟಿವ್ ಬಂದಿದೆ. ಆದರೆ ವೈದ್ಯರ ವರದಿ ಮತ್ತೊಮ್ಮೆ ಪಾಸಿಟಿವ್ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ