ಒಮಿಕ್ರಾನ್ ಅಬ್ಬರ : ರಾಜ್ಯದಲ್ಲಿ `ಟಫ್ ರೂಲ್ಸ್’ ಜಾರಿ ಬಗ್ಗೆ ಆರೋಗ್ಯ ಸಚಿವರು ಹೇಳಿದ್ದೇನು..?

ಸೋಮವಾರ, 20 ಡಿಸೆಂಬರ್ 2021 (22:13 IST)
ಬೆಂಗಳೂರು:- ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಕಠಿಣ ಕ್ರಮ ಜಾರಿ ಮಾಡುವ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಹತ್ವದ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಒಟ್ಟು 19 ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಅನೇಕ ಮಂದಿ ವಿದೇಶ ಪ್ರಯಾಣ ಮಾಡಿ ಬಂದವರು. ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಹೀಗಾಗಿ ಬಹಿರಂಗ ಸಭೆ, ದೊಡ್ಡ ಒಳಾಂಗಣ ಸಭಾ ಕಾರ್ಯಕ್ರಮಗಳಿಗೆ ಒಂದೆರೆಡು ತಿಂಗಳು ಕಡಿವಾಣ ಹಾಕಬೇಕು ಎಂದು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ದಿನೇ ದಿನೇ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಈವರೆಗೆ ಒಟ್ಟಾರೆಯಾಗಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ