ಬೆಂಗಳೂರು:- ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ದಿನೇದಿನೇ ಸೋಂಕು ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಮತ್ತೆ ಐದು ಜನರಲ್ಲಿ ಒಮಿಕ್ರೋನ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ವಿದೇಶಗಳಿಂದ ಬಂದ ನಾಲ್ಕು ಜನರಲ್ಲಿ ಮತ್ತು ಮುಂಬೈನಿಂದ ಬಂದ ಒಬ್ಬ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.