ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್ ಡೋಸ್ನಿಂದಲೂ ಸಾಧ್ಯವಿಲ್ಲ. ಯಾವುದೇ ವ್ಯತ್ಯಾಸವಿಲ್ಲದೇ, ವಿಶ್ವದ ಎಲ್ಲಾ ದೇಶಗಳಲ್ಲಿ ಓಮಿಕ್ರಾನ್ ತೀವ್ರಗತಿಯಲ್ಲಿ ಹರಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ.ಜಪ್ರಕಾಶ್ಯ ಮುಲಿಲ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮುಂದೆ ಕೋವಿಡ್ ಭಯಾನಕ ರೋಗವಾಗಿ ಕಾಣಿಸುವುದಿಲ್ಲ. ಏಕೆಂದರೆ ಹೊಸ ತಳಿ ತನ್ನ ಪರಿಣಾಮದಲ್ಲಿ ಸೌಮ್ಯವಾಗಿದೆ. ಈ ಸೋಂಕಿಗೆ ತುತ್ತಾದವರಲ್ಲಿ ಕಡಿಮೆ ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾವು ನಿಭಾಯಿಸಬಲ್ಲ ಕಾಯಿಲೆ ಇದೆ. ಇದು ಡೆಲ್ಟಾಗಿಂತ ಹೆಚ್ಚು ಸೌಮ್ಯವಾಗಿದೆ. ಈ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.