ದೇಶದ ಕೋವಿಡ್-19 ಪರಿಸ್ಥಿತಿಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.
ಇನ್ನು ಈ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಿರ್ದೇಶಕ ಡಾ. ಸುಜೀತ್ ಕುಮಾರ್ ಸಿಂಗ್ ಅವರು ಮಾತನಾಡುತ್ತಿದಾಗ, ಒಮಿಕ್ರಾನ್ ಉಪ ರೂಪಾಂತರ ಬಿಎ.2(Omicron sub-variant BA.2) ದೇಶದಲ್ಲಿ ಈಗ ಹೆಚ್ಚು ಹರಡುತ್ತಿದೆ ಎಂದು ಹೇಳಿದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಜಿನೋಮ್ ಅನುಕ್ರಮಣಿಕೆಯಲ್ಲಿ 1,292 ಒಮಿಕ್ರಾನ್ ರೂಪಾಂತರ ಪ್ರಕರಣಗಳು ಕಂಡುಬಂದಿವೆ ಎಂದು ಸರ್ಕಾರ ತಿಳಿಸಿದ್ದು, ಜನವರಿಯಲ್ಲಿ ಈ ಸಂಖ್ಯೆ 9,672ಕ್ಕೆ ಏರಿದೆ ಎಂದು ತಿಳಿಸಿದೆ.
ಮುನ್ನೆಚ್ಚರಿಕೆಗಳನ್ನು ಮುಂದುವರಿಸಬೇಕಾಗಿದೆ ಎಂದು ಪ್ರತಿಪಾದಿಸಿದ ಸರ್ಕಾರ, ಕೋವಿಡ್ ಪ್ರಕರಣಗಳ ಆರಂಭಿಕ ಸೂಚನೆಯನ್ನ ಕೆಲವು ಸ್ಥಳಗಳಲ್ಲಿ ವರದಿ ಮಾಡಲಾಗಿದೆ ಎಂದು ತಿಳಿಸಿದ್ದು, ಈ ಪ್ರವೃತ್ತಿಯನ್ನು ಗಮನಿಸಬೇಕಾಗಿದೆ ಎಂದು ಹೇಳಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ವಿಷಯದಲ್ಲಿ ಅಗ್ರ 10 ರಾಜ್ಯಗಳು ದೇಶದ ಒಟ್ಟು ಸಕ್ರಿಯ ಸೋಂಕುಗಳಲ್ಲಿ ಶೇಕಡಾ 77ಕ್ಕೂ ಹೆಚ್ಚು ಹೊಂದಿವೆ ಎಂದು ಸರ್ಕಾರ ಹೇಳಿದೆ. ಅವುಗಳೆಂದ್ರೆ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚು ದಾಖಲಿಸಲ್ಪಡುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.