ಐದು ಮಹಾನಗರ ಪಾಲಿಕೆಗಳ ಆಡಳಿತ ಜಿಲ್ಲಾಧಿಕಾರಿಗಳ ತೆಕ್ಕೆಗೆ
ರಾಜ್ಯದ ಐದು ಮಹಾನಗರ ಪಾಲಿಕೆಗೆ ಚುನಾವಣೆ ನಡೆದು ಮೇಯರ್ ಹಾಗೂ ಉಪಮೇಯರ್ ಅವರನ್ನು ಆಯ್ಕೆ ಮಾಡಬೇಕಿದೆ.
ಬಳ್ಳಾರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಆಯಾ ವ್ಯಾಪ್ತಿಯ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿಯನ್ನು ನೇಮಕ ಮಾಡುತ್ತಿದ್ದ ಸರ್ಕಾರ, ಆದೇಶವನ್ನು ಬದಲಾವಣೆ ಮಾಡಿ ಇದೀಗ ಜಿಲ್ಲಾಧಿಕಾರಿಗಳನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.