ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್

ಶನಿವಾರ, 24 ಜೂನ್ 2017 (18:23 IST)
ನನಗೆ ಮುಖ್ಯಮಂತ್ರಿಯಾಗಬೇಕು ಎನ್ನುವ ಆಸೆಯಿದೆ. ಆದರೆ ದುರಾಸೆಯಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
 
ಜಿಲ್ಲೆಯ ಸೋಮದೇವರಹಟ್ಟಿ ತಾಂಡಾದ ದುರ್ಗಾದೇವಿ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವ ಪಾಟೀಲ್, ದುರ್ಗಾದೇವಿಯ ಆಶೀರ್ವಾದವಿರುವುದರಿಂದ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ರೇಸ್‌ನಲ್ಲಿದ್ದ ಸಚಿವ ಪಾಟೀಲ್, ಹೈಕಮಾಂಡ್ ಜಿ.ಪರಮೇಶ್ವರ್‌ರನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದರಿಂದ ಅಧ್ಯಕ್ಷರಾಗುವ ಬಯಕೆ ಈಡೇರಿರಲಿಲ್ಲ ಎನ್ನಲಾಗಿದೆ.
 
ಸಚಿವನಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದು ಜನತೆ ಬಯಸಿದಲ್ಲಿ ಮುಂಬರುವ ವರ್ಷಗಳಲ್ಲಿ ಮುಖ್ಯಮಂತ್ರಿಯಾಗುತ್ತೇನೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ