ಸ್ಯಾಂಡಲ್ವುಡ್ ಖ್ಯಾತ ನಟಿ ರಮ್ಯಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಆದರೂ ಅವರು ಸಿನಿಮಾಗಳಿಂದ ದೂರ ಉಳಿದುಕೊಂಡಿದ್ದಾರೆ..ರಾಜಕೀಯದ ಸಲುವಾಗಿ ನಟನೆಯಿಂದ ಅವರು ಬ್ರೇಕ್ ಪಡೆದುಕೊಂಡಿದ್ದರು.. ಹಾಗಂತ ಚಿತ್ರರಂಗದ ಜೊತೆಗಿನ ನಂಟನ್ನು ಪೂರ್ತಿಯಾಗಿ ಕಡಿದುಕೊಂಡಿಲ್ಲ.. ಈಗಲೂ ಅನೇಕ ಸಿನಿಮಾಗಳ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾ ಇರುತ್ತಾರೆ.. ರಮ್ಯಾ ಆದಷ್ಟು ಬೇಗ ಕಮ್ಬ್ಯಾಕ್ ಮಾಡಲಿ ಅನ್ನೋದು ಅವರ ಅಭಿಮಾನಿಗಳ ಬಯಕೆ. ಈ ನಡುವೆ ರಮ್ಯಾ ಅವರ ಒಂದು ಫೋಟೋ ವೈರಲ್ ಆಗಿದೆ..ಕರಣ್ ಜೋಶಿ ಅನ್ನೋ ಹುಡುಗನ ಜೊತೆ ಆತ್ಮೀಯವಾಗಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ..