ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

Sampriya

ಶುಕ್ರವಾರ, 22 ಆಗಸ್ಟ್ 2025 (18:19 IST)
Photo Credit X
ಬೆಂಗಳೂರು: ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ಅವರನ್ನು ಇದೀಗ ವಶಕ್ಕೆ ಪಡೆಯಲಾಗಿದೆ.

ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ವೀರೇಂದ್ರ ಪಪ್ಪಿ ಮೇಲಿದ್ದು ಈ ಸಂಬಂಧ ಗೋವಾದಲ್ಲಿ ಪಪ್ಪಿ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. 

ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ದಾಳಿ ನಡೆಸಿ ದಾಖಲೆ ಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ವೀರೇಂದ್ರ ಅವರು ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 

ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್ ಮತ್ತು ಪ್ರೈಮ್ 9 ಟೆಕ್ನಾಲಜೀಸ್ ಎಂಬ ಮೂರು ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ