ಆನ್‌ಲೈನ್ ಶಿಕ್ಷಣವೇ ವಿದ್ಯಾರ್ಥಿಗಳಿಗೆ ಶಿಕ್ಷೆ

ಭಾನುವಾರ, 16 ಅಕ್ಟೋಬರ್ 2022 (08:45 IST)
ಶಿವಮೊಗ್ಗ : ಆನಲೈನ್ ತರಗತಿಗಳಿಗಾಗಿ ಮಕ್ಕಳಿಗೆ ಮೊಬೈಲ್ ನೀಡುವುದರಿಂದ ಅವರಲ್ಲಿ ಖಿನ್ನತೆ ಉಂಟಾಗಿ, ಆನ್ಲೈನ್ ಶಿಕ್ಷಣವೆನ್ನುವುದು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಪರಿಣಮಿಸುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಆತಂಕಪಟ್ಟಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಿಮ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ಕೋವಿಡ್ ಬಂದ ನಂತರ ಮಾನಸಿಕ ಕಾಯಿಲೆಗಳ ಪ್ರಮಾಣ ಹೆಚ್ಚಾಗಿದ್ದು, ಆನ್ಲೈನ್ ತರಗತಿಗಳಿಗಾಗಿ ಮಕ್ಕಳಿಗೆ ಮೊಬೈಲ್ ನೀಡುವುದರಿಂದ ಅವರಲ್ಲಿ ಖಿನ್ನತೆಯುಂಟಾಗಿದೆ. ಶಿಕ್ಷಣ ಅನ್ನೋದು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಪರಿಣಮಿಸುತ್ತಿದೆ. ಆದ್ದರಿಂದ ಪೋಷಕರು ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ