KRS ಡ್ಯಾಂ ಭರ್ತಿಗೆ ಕೇವಲ 2 ಅಡಿ ಬಾಕಿ
ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗ್ತಿದೆ. ಇದರಿಂದಾಗಿ ಕೆಆರ್ಎಸ್ ಡ್ಯಾಂಗೆ ನೀರಿನ ಹರಿವು ಹೆಚ್ಚಾಗಿದೆ. ಡ್ಯಾಂ ಭರ್ತಿಗೆ ಇನ್ನೂ 2 ಅಡಿ ಅಷ್ಟೇ ಬಾಕಿ ಇದ್ದು, ಡ್ಯಾಂನಿಂದ ನದಿಗೆ 13 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತ ಮಾಡಲಾಗಿದೆ. ಇನ್ನೂ ಅಧಿಕ ಮಳೆಯಾದರೆ ಹೊರ ಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ನದಿ ಪಾತ್ರದ ಜನರಿಗೆ ಆಸ್ತಿ ಪಾಸ್ತಿ ರಕ್ಷಣೆಗೆ ಎಚ್ಚರಿಕೆ ನೀಡಲಾಗಿದೆ.