ಬರೀ 7 ದಿನದ ವಿಧಾನಮಂಡಲ ಅಧಿವೇಶನದಲ್ಲಿ ಏನೆಲ್ಲಾ ಚರ್ಚೆಯಾಗಲು ಸಾಧ್ಯ?
ಮಂಗಳವಾರ, 7 ಫೆಬ್ರವರಿ 2017 (09:59 IST)
ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಕೇವಲ 7 ದಿನದ ತರಾತುರಿಯ ಅಧಿವೇಶನ ಇದಾಗಲಿದೆ. ಹೀಗಾಗಿ ರಾಜ್ಯಪಾಲರ ಭಾಷಣಕ್ಕೆ ವಂದನೆ ನಿರ್ಣಯ ಕೈಗೊಳ್ಳುವ ಸಮಯದಲ್ಲೇ ಆದಷ್ಟು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ತೀರ್ಮಾನಿಸಿವೆ.
ಕೇವಲ 7 ದಿನಗಳಲ್ಲಿ ರಾಜ್ಯದ ಬರ ಪರಿಸ್ಥಿತಿ ಸೇರಿದಂತೆ ಗಂಭೀರ ವಿಷಯಗಳ ಚರ್ಚೆ ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಇದರ ನಡವೆ ವಿಪಕ್ಷಗಳು ರಾಜ್ಯದ ಕಾನೂನು ಸುವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾದು ಕುಳಿತಿವೆ.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಜನತೆಗೆ ಮಾತ್ರವಲ್ಲ, ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಲ್ಲದೇ ಒದ್ದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ