ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಳಗ್ಗೆಯಿಂದ ಆರಂಭಗೊಂಡು ಮಧ್ಯಾಹ್ನ 2 ರವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಕೊಡಲಾಗಿದೆ.
ಕಲಬುರಗಿ ನಗರ ಮತ್ತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಜುಲೈ 20 ವರೆಗೆ ಘೋಷಿಸಲಾದ ಲಾಕ್ ಡೌನ್ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ನಿರ್ವಹಿಸಬೇಕು. 2 ರಿಂದ ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಆದೇಶಿಸಿದ್ದಾರೆ.
ಈ ಅದೇಶವು ಅಸ್ಪತ್ರೆ ಮತ್ತು ಔಷಧಿ ಅಂಗಡಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.