ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ- ಗೃಹ ಸಚಿವ ಬೊಮ್ಮಾಯಿ
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ ಅವರು, ಡ್ರಗ್ಸ್ ಜಾಲವನ್ನು ನಿಯಂತ್ರಿಸುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ನಿರ್ದೇಶಕ ಇಂದ್ರಜಿತ್ ಲಂಕೇಶ್ ರನ್ನು ವಿಚಾರಣೆಗೆ ಕರೆದಿದ್ದೇವೆ. ಅವರು ನೀಡಿರುವ ಮಾಹಿತಿಯನ್ನು ಪಡೆದುಕೊಳ್ಳಲಾಗುವುದು. ನಮ್ಮ ಬಳಿಯೂ ಕೆಲವು ಮಾಹಿತಿ ಇದೆ. ಎಲ್ಲವನ್ನೂ ಪರಿಶೀಲನೆ ಮಾಡಲು ಸೂಚಿಸಿದ್ದೇನೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದ್ದಾರೆ.