ಆಪರೇಷನ್ ಆಡಿಯೋ ಪ್ರಕರಣ; ಎಫ್.ಐ.ಆರ್. ರದ್ದು ಕೋರಿ ಅರ್ಜಿ ಸಲ್ಲಿಸಿದ ಬಿಎಸ್ ವೈ
ಬುಧವಾರ, 20 ಫೆಬ್ರವರಿ 2019 (10:19 IST)
ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾದ ಎಫ್.ಐ.ಆರ್. ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಫೆ. 13 ರಂದು ಶರಣುಗೌಡ ಮೂಲಕ ಗುರುಮಿಟ್ಕಲ್ ಜೆಡಿಎಸ್ ಶಾಸಕ ನಾಗನಗೌಡಗೆ ಆಫರ್ ಕೊಟ್ಟಿದ್ದ ಸಂಬಂಧ ಬಿಎಸ್ ವೈ ಸೇರಿ ನಾಲ್ಚರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆಯಡಿ ಎಫ್ ಐಆರ್ ಕೂಡ ದಾಖಲಾಗಿತ್ತು.
ಈ ಹಿನ್ನಲೆಯಲ್ಲಿ ಬಿಎಸ್ ವೈ ಪರ ವಕೀಲರು ಎಫ್.ಐ.ಆರ್. ರದ್ದು ಕೋರಿ ಕಲಬುರಗಿಯ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇಂದೇ ಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಲಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.