ಅಪರೇಷನ್ ಆಡಿಯೋ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್.ಐ.ಆರ್ ದಾಖಲು
ಗುರುವಾರ, 14 ಫೆಬ್ರವರಿ 2019 (09:38 IST)
ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂಗೌಡ ಮತ್ತು ಮರಂಕಲ್ ವಿರುದ್ಧ ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಶಾಸಕರ ಪುತ್ರ ಶರಣಗೌಡರಿಗೆ ತಮ್ಮ ತಂದೆಗೆ ರಾಜೀನಾಮೆ ಕೊಡಲು ಒಪ್ಪಿಸು ಎಂದು 10 ಕೋಟಿ ರೂ. ಮುಂಗಡ ಹಣದ ಆಮಿಷಯೊಡ್ಡಿದ್ದಲ್ಲದೇ, ಆತ ಈ ಕೆಲಸ ಮಾಡುವುದಿಲ್ಲ ಎಂದಿದ್ದಕ್ಕೆ ನಿಮ್ಮ ತಂದೆಯ ರಾಜಕೀಯ ಜೀವನ ಮುಗಿಸಿಬಿಡುತ್ತೇವೆ ಎಂದು ಹೆದರಿಸಿದ ಕಾರಣ ಆಡಿಯೋ ಸಿಡಿ ದಾಖಲೆಯೊಂದಿಗೆ ಶರಣಗೌಡ ಅವರು ಯಡಿಯೂರಪ್ಪ, ಶಿವನಗೌಡ ಹಾಗೂ ಪ್ರೀತಂಗೌಡ ಮತ್ತು ಮರಂಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ದೂರಿನ ಆಧಾರದ ಮೇಲೆ ಈ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 19/2019 ಕಲಂ 8 ಮತ್ತು 12. ಭ್ರಷ್ಟಾಚಾರ ತಡೆಗಟ್ಟುವ ತಿದ್ದುಪಡಿ ಅಧಿನಿಯಮ 2018 ಮತ್ತು 120(ಬಿ), ಐಪಿಸಿ 506 ಕಾಯ್ದೆ ಅಡಿ ಎಫ್.ಐ.ಆರ್ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.