ರಾಜ್ಯ ರಾಜಕೀಯದಲ್ಲಿ ಕೋಲಾಹಲ: 13 ಶಾಸಕರ ರಾಜೀನಾಮೆ?

ಶನಿವಾರ, 6 ಜುಲೈ 2019 (14:09 IST)
ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಬೇತಾಳದಂತೆ ಕಾಡುತ್ತಿದೆ. ಸರಕಾರವನ್ನು ಉರುಳಿಸಲು ಹಲವಾರು ಪ್ರಯತ್ನಗಳು ಸಾಗುತ್ತಿವೆ ಎನ್ನಲಾಗುತ್ತಿದೆ. ಇದೀಗ ಎಂಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸುಮಾರು 13 ಶಾಸಕರು ರಾಜೀನಾಮೆ ನೀಡಲಿದ್ದಾರೆ. ಸ್ಪೀಕರ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎನ್ನುವ ವದಂತಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ
 
ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್, ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಜೆಡಿಎಸ್ ನ ಎಚ್.ವಿಶ್ವನಾಥ್ ಹಾಗೂ ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಇವರೆಲ್ಲರೂ  ಇಂದು ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ